ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಮಂಡಳಿ ಪ್ರಕಟಿಸಿದ್ದು, 2023ರ ಮಾರ್ಚ್ 10 ರಿಂದ 29ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ವೇಳಾಪಟ್ಟಿಯನ್ನು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸುವಂತೆ ಸೂಚಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 21ರಂದು ಸಂಜೆ 5.30 ರ ಒಳಗಾಗಿ jdexam.dpue@gmail.com ಈಮೇಲ್ಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ.
