ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ಪಡೆ

PAY CM
Advertisement

ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರು ಪೇ ಸಿಎಂ ಪೋಸ್ಟರ್‌ ಅಭಿಯಾನ ನಡೆಸಿದರು.
ರೇಸ್‌ಕೋರ್ಸ್‌ ಕಾಂಪೌಂಡ, ಬಿಎಂಟಿಸಿ ಬಸ್‌ಗೆ ಪೋಸ್ಟರ್‌ ಅಂಟಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಘೋಷಣೆ ಕೂಗಿದರು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ರಣದೀಪ್‌ ಸಿಂಗ್‌ ಸುರ್ಜೇವಾಲಾ, ಬಿ.ಕೆ. ಹರಿಪ್ರಸಾದ, ಪ್ರಿಯಾಂಕ್‌ ಖರ್ಗೆ, ಎಂ.ಬಿ. ಪಾಟೀಲ ಸೇರಿದಂತೆ ಇನ್ನಿತರ ನಾಯಕರು ಭಾಗಿಯಾಗಿದ್ದರು.
ಸ್ವತಃ ಡಿ.ಕೆ. ಶಿವಕುಮಾರ ಹಾಗೂ ಸಿದ್ದರಾಮಯ್ಯ ಪೇ ಸಿಎಂ ಪೋಸ್ಟರ್‌ ಅಂಟಿಸುತ್ತಿದ್ದಂತೆ ಪೊಲೀಸರು ಕಾರ್ಯಕರ್ತರು ಸೇರಿದಂತೆ ಒಬ್ಬೊಬ್ಬರನ್ನು ವಶಕ್ಕೆ ಪಡೆದರು. ಬಳಿಕ
ಅಂಟಿಸಿದ್ದ ಪೋಸ್ಟರ್‌ಗಳನ್ನು ಪೊಲೀಸರು ತೆಗೆದು ಹಾಕಿದರು.