ಬೆಂಗಳೂರು: ಪೇ ಸಿಎಂ ಅಭಿಯಾನ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ. ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು. ಆಧಾರರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.