ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಯುವಕನೋರ್ವನನ್ನು ತೇರದಾಳ ಪೊಲೀಸರು ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.
ಆರೋಪಿ ಶಿವಾನಂದ ಮಹಾಲಿಂಗಪ್ಪ ವಂದಾಲ ಅಕ್ಟೋಬರ್ 16ರಂದು ಸಂಜೆ 7ಗಂಟೆ ಸುಮಾರಿಗೆ ತನ್ನ ಮನೆಯ ಮುಂದೆ ಮಾಟವಾಡುತ್ತಿದಾಗ ಆರೋಪಿ ತನ್ನ ಮನೆಗೆ ಕರೆದುಕೊಂಡು ಹೋಗಿ ಕೋಣೆಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಎಂದು ಆರೋಪಿಸಿ ದೂರು ನೀಡಲಾಗಿದೆ.
ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬಾಲಕಿಯ ತಾಯಿ ದೂರಿನನ್ವಯ ತೇರದಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.