ಪ್ಯಾನ್‌-ಆಧಾರ್ ಲಿಂಕ್: ಗಡುವು ವಿಸ್ತರಣೆ

ವಿಸ್ತರಣೆ
Advertisement

ನವದೆಹಲಿ: ಪ್ಯಾನ್‌ಕಾರ್ಡ್‌ ಮತ್ತು ಆಧಾರ್ ಕಾರ್ಡ್‌ ಲಿಂಕ್ ಮಾಡುವ ಗಡುವನ್ನು 2023ರ ಜೂನ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಹಣಕಾಸು ಸಚಿವಾಲಯ ಮಂಗಳವಾರ ಹೊರಡಿಸಲಾದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದು, ಪ್ರಸ್ತುತ ಮಾರ್ಚ್‌ 31ಕ್ಕೆ ಗಡುವು ಅಂತ್ಯಗೊಳ್ಳಲಿದೆ. ಆದರೆ ಲಿಂಕ್‌ ಮಾಡಲು ಇರುವ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಮತ್ತೆ ಗಡುವನ್ನು ವಿಸ್ತರಣೆ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.