ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಗುಣಮಟ್ಟದ ತರಬೇತಿ – ಸಿಎಂ ಬೊಮ್ಮಾಯಿ

ಏಕಲವ್ಯ ಕ್ರೀಡಾ ಪ್ರಶಸ್ತಿ
Advertisement

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರು ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರೊಂದಿಗೆ ಏಕಲವ್ಯ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಭಾರತ ಕ್ರೀಡೆಯಲ್ಲಿ ಉತ್ತಮ ಸಾಧನೆಗೈಯುತ್ತಿದೆ. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜಿತೋ ಇಂಡಿಯಾ ಮೂಲಕ ದೇಶದ ಕ್ರೀಡಾಪಟುಗಳ ಉತ್ಸಾಹವನ್ನು ಹೆಚ್ಚಿಸಿದ್ದಾರೆ. ಇದರಿಂದ ಸ್ಫೂರ್ತಿ ಪಡೆದಿರುವ ನಾವು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ರಾಜ್ಯದಲ್ಲಿ 75 ಕ್ರೀಡಾಪಟುಗಳಿಗೆ ಈಗಿನಿಂದಲೇ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಶಾಸಕ ರಿಜ್ವಾನ್‌ ಅರ್ಷದ್‌, ಕರ್ನಾಟಕ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಗೋವಿಂದರಾಜು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮೊದಲಾದವರು ಉಪಸ್ಥಿತರಿದ್ದರು.