ಪ್ರತಿ ತಿಂಗಳು 2000 ರೂ.

ಗೃಹಲಕ್ಷ್ಮೀ
Advertisement

ಬೆಂಗಳೂರು: ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ₹2,000 ನೆರವು ನೀಡುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.
‘ನಾ ನಾಯಕಿ’ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್‌ನ್ನು ಪ್ರಿಯಾಂಕಾ ಗಾಂಧಿ ಅವರಿಗೆ ಸಲ್ಲಿಸಲಾಯಿತು. ಈ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿದೆ. ಇದು ಕಾಂಗ್ರೆಸ್‌ ಗ್ಯಾರಂಟಿ ನಂ. 2 ಎಂದು ಹೇಳಿದೆ. ಇದಕ್ಕೂ ಮುನ್ನ 200 ಯೂನಿಟ್‌ ವಿದ್ಯುತ್‌ ನೀಡುವುದಾಗಿ ಗ್ಯಾರಂಟಿ ನಂ. 1 ಎಂದು ಘೋಷಿಸಲಾಗಿತ್ತು.