ಪ್ರತಿ ಮನೆಗೂ ೨೦೦ ಯುನಿಟ್ ವಿದ್ಯುತ್ ಉಚಿತ

Advertisement

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ೨೦೦ ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಅವರು ಮಾತನಾಡಿ, ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ ಎಂದರು.