ಮಂಡ್ಯ: ಸನ್ಮಾನ್ಯ ಪ್ರಧಾನ ಮಂತ್ರಿಗಳು ಮಾಚ್೯ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸಿ ಮಂಡ್ಯ ನಗರದ ಸರ್ಕಾರಿ ಅತಿಥಿಗೃಹದ ವೃತದಿಂದ ಹಳೆ ಎಂವಿಜಿ ರಸ್ತೆಯವರೆಗೆ ರೋಡ್ ಶೋ ನಡೆಸಲಿದ್ದಾರೆ.
ಈ ಹಿನ್ನಲೆಯಲ್ಲಿ ರಸ್ತೆಯ ಶುಚಿತ್ವ, ದುರಸ್ಥಿ,ಕುರಿತು ಜಿಲ್ಲಾಧಿಕಾರಿ ಡಾ: ಹೆಚ್.ಎನ್. ಗೋಪಾಲಕೃಷ್ಣ ಅವರು ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿ ನಾಳೆಯಿಂದ ಎಲ್ಲಾ ಕೆಲಸಗಳು ಪ್ರಾರಂಭವಾಗಬೇಕು ಎಂದರು.
ಪ್ರವಾಸಿ ಮಂದಿರದ ಸರ್ಕಲ್ ನಿಂದ ರೋಡ್ ಶೋ ಪ್ರಾರಂಭವಾಗಿ, ಸಂಜಯ್ ಸರ್ಕಲ್ ಮಾರ್ಗವಾಗಿ ನಂದ ಸರ್ಕಲ್ ನಲ್ಲಿ ರೋಡ್ ಶೋ ಮುಕ್ತಾಯವಾಗಲಿದೆ. ಸುಮಾರು 1.5 ಕಿ.ಮೀ ರೋಡ್ ಶೋ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ:ಹೆಚ್ ಎಲ್ ನಾಗರಾಜು,, ತಹಶೀಲ್ದಾರ್ ವಿಜಯ್ ಕುಮಾರ್, ನಗರಸಭಾ ಆಯುಕ್ತ ಮಂಜುನಾಥ್, ಪರಿಸರ ವಿಭಾಗದ ಅಭಿಯಂತರ ರುದ್ರೇಗೌಡ, ಅಭಿಯಂತರ ರವಿಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನರೇಶ್ ಇನ್ನಿತರರಿದ್ದರು.