ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಹೊರಡಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿತ್ತು.