ಬಡಾವಣೆಗಳು ಜಲಾವೃತ; ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ: ಸಿಎಂ

Advertisement


ಬೆಂಗಳೂರು: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಗ್ಗಿಲ್ಲದೆ ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಅನುಮತಿಗಳನ್ನು ನೀಡಿದ್ದಾರೆ. ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ. ಕೆರೆಗಳ ನಿರ್ವಹಣೆಯ ಬಗ್ಗೆ ಅವರು ಯೋಚಿಸಿಯೂ ಇಲ್ಲ. ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದು 1500 ಕೋಟಿ ರೂ.ಗಳನ್ನು ಬಿಡು ಗಡೆ ಮಾಡಿದೆ. ನಿನ್ನೆ ಪುನಃ 300 ಕೋಟಿ ರೂ.ಗಳನ್ನು ಒತ್ತುವರಿ ತೆರೆವುಗೊಳಿಸಲು ನೀಡಲಾಗಿದೆ. ರಾಜಕಾಲುವೆಗಳಿಗೆ ಪಕ್ಕಾ ಕಟ್ಟಡ ಕಟ್ಟುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವೆಗೆ ಯಾವುದೇ ತೊಂದರೆ ಇಲ್ಲದಂತೆ ವ್ಯವಸ್ಥೆ ಮಾಡಲಾಗುವುದು. ಒತ್ತುವರಿಗೂ ಅವಕಾಶವಿಲ್ಲದಂತೆ ಎಚ್ಚರ ವಹಿಸಲಾಗುವುದು ಎಂದರು.