ಬಸ್ವೊಂದರಲ್ಲಿ ಅಡಗಿ ಕುಳಿತಿದ್ದ ಬೃಹತ್ ಹೆಬ್ಬಾವೊಂದನ್ನು ಹಗ್ಗದಿಂದ ಹೊರತೆಗೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿನ ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್ ಬಸ್‌ನಲ್ಲಿ ಈ ಹಾವು ಅಡಗಿ ಕುಳಿತಿದ್ದು, ಹಾವು ಕಂಡು ಶಾಲಾ ಆಡಳಿತ ಮಂಡಳಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾವುನ್ನು ಸುರಕ್ಷಿತವಾಗಿ ತೆಗೆದು ಮರಳಿ ಅರಣ್ಯದಲ್ಲಿ ಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.