ಅಪಘಾತ: ಕಾಂಗ್ರೆಸ್‌ ಸಮಾವೇಶಕ್ಕೆ ಬಂದಿದ್ದ ವ್ಯಕ್ತಿ ಸಾವು

ಅಪಘಾತ
Advertisement

ಹುಬ್ಬಳ್ಳಿ: ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿ ಮೇಲೆ ಬಸ್ ಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಜೆಸಿ ನಗರದ ಜೋಶಿ ಪೆಟ್ರೋಲ್ ಬಂಕ್ ಎದುರು ಸೋಮವಾರ ನಡೆದಿದೆ.
ಅಣ್ಣಿಗೇರಿ ನಿವಾಸಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸಗೆ ದಾಖಲಿಸಲಾಗಿದೆ.
ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದಾಗ ಗದುಗಿನಿಂದ ಬಂದ ಗದಗ-ಹುಬ್ಬಳ್ಳಿ ಬಸ್ ಅವರ ಮೇಲೆ ಹಾಯ್ದಿದೆ. ಬಸ್ ಎಡಭಾಗದ ಟೈರ್ ವ್ಯಕ್ತಿಯ ತಲೆ ಮೇಲೆ ಹರಿದಿದೆ. ಈ ವೇಳೆ ಕೆಲ ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಬಂದ ಸಂಚಾರ‌ ಠಾಣೆ ಪೊಲೀಸರು ಗಾಯಾಳುಗಳನ್ನು ಆಟೋದಲ್ಲಿ ಆಸ್ಪತ್ರೆಗೆ ಸಾಗಿಸಿದರು.