ಬಿಜೆಪಿಗೆ ಗುಡ್‌ಬೈ: ಶೆಟ್ಟರ ಘೋಷಣೆ

Advertisement

ಹುಬ್ಬಳ್ಳಿ: ಪ್ರೀತಿ ವಿಶ್ವಾಸಕ್ಕೂ ಬಿಜೆಪಿಯಲ್ಲಿ ಬೆಲೆ ಇಲ್ಲ. ನಾಳೆ ಮುಂಜಾನೆ ನಾನು ಬಿಜೆಪಿ ಪಕ್ಷಕ್ಕೆ ರಾಜಕೀಯ ನೀಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದ್ದಾರೆ.
ಬಿಜೆಪಿ ನಾಯಕರಾದ ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್, ಪ್ರಲ್ಹಾದ್ ಜೋಶಿ ಅವರೊಂದಿಗೆ ನಡೆದ ಮಾತುಕತೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ತತ್ವ ಸಿದ್ಧಾಂತಕ್ಕೆ ವ್ಯತಿರಿಕ್ತವಾಗಿ ನಡೀತಿದೆ. ನಾಳೆ ಶಿರಸಿಗೆ ಹೋಗಿ ರಾಜೀನಾಮೆ ಸಲ್ಲಿಸುತ್ತೇನೆ. ಇದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇನೆ ಎಂದು ಅವರು ಹೇಳಿದರು.