ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ

ಚಿಕ್ಕನಗೌಡರ
Advertisement

ಕುಂದಗೋಳ: ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ತಿಳಿಸಿರುವ ಅವರು, ಬಿಜೆಪಿಯಲ್ಲಿ ಕಳೆದ 4 ವರ್ಷಗಳಿಂದ ಪಕ್ಷವನ್ನು ಗ್ರಾಮೀಣ ಮಟ್ಟದಲ್ಲಿ ಕಟ್ಟಿ ಬೆಳೆಸುವಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಿಂದ ಶಾಸಕತ್ವದವರೆಗೆ ನನ್ನ ಪ್ರಾಮಾಣಿಕ ಶ್ರಮದ ಬಗ್ಗೆ ತೃಪ್ತಿ ಇದೆ. ಆದರೆ ಪ್ರಸ್ತುತ ನಡೆಯುತ್ತಿರುವ ಹಲವಾರು ಬೆಳವಣಿಗೆಗಳಿಂದ ಮನಸ್ಸಿಗೆ ತೀವ್ರ ನೋವಾಗಿದ್ದು, ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸಿದ್ದಾರೆ.