ಭಾರತ್ ಜೋಡೊ ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆ ಹಮ್ಮಿಕೊಂಡಿರುವುದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶಕ್ಕಲ್ಲ. ಜನರಲ್ಲಿ ಭಯ, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ, ಈ ಜನರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂಬ ಕಾರಣಕ್ಕೆ. ಭಾರತ ಐಕ್ಯತಾ ಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದರು.