ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಟಿಕೆಟ್ ಕುರಿತು ವಿಚಾರವಾಗಿ. ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ ಎಂದು ಬಿಎಸ್‍ವೈ ಹೇಳಿದ್ದು, ಇದೀಗ ಬಿಜೆಪಿಯ ಆ ಟಿಕೆಟ್ ವಂಚಿತರು ಯಾರು ಎಂಬ ಪ್ರಶ್ನೆ ಕಾಡಿದೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ಬಿಜೆಪಿ ಪಕ್ಷಕ್ಕೆ ಯಾರು ಬರುತ್ತಾರೆ ಅವರಿಗೆ ಸ್ವಾಗತ. ಯಾರು ಪಕ್ಷ ಬಿಟ್ಟು ಹೋಗ್ತಾರೆ ಅವರು ಬಿಟ್ಟು ಹೋಗಬಹುದು. ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು ಉಳಿದ ಎಲ್ಲಾ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡಲಾಗುವುದು. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರವೇ ಪ್ರಕಟಗೊಳ್ಳಲಿದೆ. ತಮ್ಮ ಪುತ್ರ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ. ಬಹುತೇಕ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸಬಹುದು ಎಂದು ಅವರು ಸೂಚ್ಯವಾಗಿ ಹೇಳಿದರು. ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದ್ದು, ನಾಲ್ಕೈದು ಜನರಿಗೆ ತಪ್ಪಬಹುದು ಎಂದರು.