ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಲಘು ಹೃದಯಾಘಾತ

ಬೆಟ್ಟೆಸ್ವಾಮಿ
Advertisement

ತುಮಕೂರು: ಬಿಜೆಪಿ ಎರಡನೇ ಪಟ್ಟಿಯಲ್ಲಿ ತಮಗೆ ಗುಬ್ಬಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಆಘಾತಕ್ಕೊಳಗಾದ ಹಿಂದುಳಿದ ವರ್ಗಗಳ ಮುಖಂಡ ಜಿ. ಎನ್. ಬೆಟ್ಟ ಸ್ವಾಮಿ ಅವರಿಗೆ ಬುಧವಾರ ಮಧ್ಯರಾತ್ರಿ ಹೃದಯಬೇನೆ ಕಾಣಿಸಿಕೊಂಡಿದ್ದು, ತುಮಕೂರಿಂದ ಸಿದ್ಧಗಂಗಾ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಮಧ್ಯ ರಾತ್ರಿ ಎರಡು ಗಂಟೆ ಸಮಯದಲ್ಲಿ ಕುಟುಂಬಸ್ಥರು ಬೆಟ್ಟ ಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತಂದಿದ್ದು ಹೃದಯಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪರೀಕ್ಷೆ ಗೊಳಪಡಿಸಿ ಬೆಳಿಗ್ಗೆ ವರೆಗೆ ಚಿಕಿತ್ಸೆ ನೀಡಿದ್ದಾರೆ. ಬೆಳಿಗ್ಗೆಯವರೆಗೆ ಆಸ್ಪತ್ರೆಯಲ್ಲಿ ಉಳಿದು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.