ನಾಗಮಂಗಲ ವಿಧಾನಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿ ಬಿ.ಎಂ. ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಟಿಕೆಟ್ ದೊರೆಯುವುದೆಂಬ ಭರವಸೆಯೊಂದಿಗೆ ಕೆಲ ತಿಂಗಳ ಹಿಂದೆ ಫೈಟರ್ ರವಿ ಬಿಜೆಪಿ ಸೇರಿದ್ದರು. ಆದರೆ, ಬಿಜೆಪಿ ಫೈಟರ್ ರವಿ ಬದಲಿಗೆ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.