ಬಿಜೆಪಿ ಮುಖಂಡನ ಹತ್ಯೆ

Advertisement


ಧಾರವಾಡ: ಗ್ರಾಮದ ಜಾತ್ರೆಯಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಬಿಜೆಪಿ ಯುವ ಮುಖಂಡ ಪ್ರವೀಣ ಕಮ್ಮಾರ ಎಂಬ ಯುವಕನನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಗ್ರಾಮದ ಉಡಚಮ್ಮ ದೇವಿ ಜಾತ್ರೆಯ ಸಂದರ್ಭದಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆಯಿತು. ಕೂಟೂರ ಗ್ರಾಪಂ ಉಪಾಧ್ಯಕ್ಷನಾಗಿದ್ದ ಪ್ರವೀಣ ತಕ್ಷಣ ಜಗಳ ಬಿಡಿಸಿದ್ದಾರೆ.
ಆದರೆ, ಕುಡಿದ ಅಮಲಿನಲ್ಲಿ ಜಗಳದ ಗುಂಪೊಂದು ಪ್ರವೀಣಗೆ ಚಾಕುವಿನಿಂದ ಇರಿದು ತೀವ್ರ ಗಾಯಗೊಳಿಸಿದ್ದರು.
ತಕ್ಷಣ ಪ್ರವೀಣನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ ಬೆಳಗಿನ ಜಾವ ಪ್ರವೀಣಿದ್ದಾನೆ ಎಂದು ಮೂಲಗಳು ತಿಳಿಸಿವೆ.
ರಾಘವೇಂದ್ರ ಪಟಾತ್ ಸೇರಿದಂತೆ ನಾಲ್ವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು ಇವರನ್ನು ಹುಡುಕುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಭೇಟಿ ನೀಡಿದರು. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣೆ ರಂಗದಲ್ಲಿರುವ ಗ್ರಾಮೀಣ ಕ್ಷೇತ್ರದಲ್ಲಿ ಈ ಕೊಲೆ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.