ಮಂಗಳೂರು : ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಅರುಣ್ ಸಿಂಗ್ ಪರೀಕ್ಷೆ ನಡೆಸಿದ ವೈದ್ಯರು, ಯಾವುದೇ ತೊಂದರೆ ಇಲ್ಲವೆಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು ನಡೆಯಲಿರುವ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಉಡುಪಿಗೆ ವಾಹನದಲ್ಲಿ ರಸ್ತೆ ಮೂಲಕ ಅರುಣ್ ಸಿಂಗ್ ತೆರಳಿದ್ದಾರೆ.