ಬಿಜೆಪಿ ಸರ್ಕಾರಕ್ಕೆ ಬರೀ ವಸೂಲಿ ಮಾಡುವುದೇ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಗುಡುಗಿದ್ದಾರೆ.
ಬೆಂಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೆ ಬಲಿಯಾದ ವಿಚಾರಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್.ಡಿ ಕುಮಾರಸ್ವಾಮಿ ಅವರು, ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವ ಸ್ಥಿತಿ ಇದೆ ಎಂದರು.
ಹೈವೆ ರಸ್ತೆಯಲ್ಲಿ ಎಎಸ್ಐ ಸೇರಿ 3-4 ಮಂದಿ ಪೊಲೀಸರು ನಿಂತು ಜನರ ವಾಹನಗಳನ್ನು ನಿಲ್ಲಿಸಿ ವಸೂಲಿ ಮಾಡಲು ನಿಂತಿರುತ್ತಾರೆ. ಬೆಳಗ್ಗೆ ವಸೂಲಿ ಮಾಡಿ ರಾತ್ರಿ ಎಲ್ಲರೂ ಹಂಚಿಕೊಳ್ಳುತ್ತಾರೆ. ಅಲ್ಲದೇ ರಾತ್ರಿ ಕುಡಿಯೋಕೆ ಅವಕಾಶ ಕೊಟ್ಟು ಕುಡಿದ ಮೇಲೆ ಮತ್ತೆ ಹಣ ವಸೂಲಿ ಮಾಡುತ್ತಾರೆ ಎಂದು ಕಿಡಿಕಾರಿದರು.