ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ: ಮೋದಿಯಿಂದ ತಾರಾವರಗೆ

Advertisement

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಪಕ್ಷದ ನಾಯಕರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಈ ಲಿಸ್ಟ್​ನಲ್ಲಿರುವ 40 ಮಂದಿ ಬಿಜೆಪಿ ನಾಯಕರು ಕರ್ನಾಟಕ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲಿದ್ದಾರೆ.