ಬೆಂಕಿ ಹಚ್ಚಿ ಇಬ್ಬರು ಹೆಣ್ಣು ಮಕ್ಕಳ ಕೊಲೆಗೆ ತಾಯಿ ಯತ್ನ

ಬೆಂಕಿ ಹಚ್ಚಿ ಇಬ್ಬರು ಹೆಣ್ಣು ಮಕ್ಕಳ ಕೊಲೆಗೆ ತಾಯಿ ಯತ್ನ
Advertisement

ಮುಳಬಾಗಲು: ಹೆತ್ತ ತಾಯಿಯೇ ತನ್ನ ಇಬ್ಬರು ಕರುಳ ಕುಡಿಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ಅಂಜನಾದ್ರಿ ಬೆಟ್ಟದ ತಪ್ಪಿಲಿನಲ್ಲಿ ಕಳೆದ ರಾತ್ರಿ ನಡೆದಿದ್ದು, ಆರು ವರ್ಷದ ಹೆಣ್ಣು ಮಗು ಸಾವನ್ನಪ್ಪಿದೆ. ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ, ತಾಯಿ ಮಗು ಸುಟ್ಟ ಗಾಯಗಳಿಂದ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಆಂಧ್ರ ಪ್ರದೇಶದ ರಾಮಸಮುದ್ರದ ನಿವಾಸಿ ಜ್ಯೋತಿ ಎಂಬ ಮಹಿಳೆ ಕಳೆದ ರಾತ್ರಿ ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ಆಕೆಯೂ ಕೂಡ ಬೆಂಕಿ ಹಚ್ಚಿಕೊಂಡಿದ್ದಾರೆ, ಇಬ್ಬರು ಮಕ್ಕಳು ಸತ್ತ ನಂತರ, ತಾನೂ ಸಾಯುತ್ತಿದ್ದೆ ಎಂದಿರುವ ತಾಯಿ, ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆ ಮಾಡಿಕೊಳ್ಳಲು ಮಕ್ಕಳೊಂದಿಗೆ ಆಗಮಿಸಿದ್ದಳು ಎನ್ನಲಾಗಿದೆ, ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿನೀಡಿ ಗಾಯಾಳುಗಳನ್ನು ಮುಳಬಾಗಿಲು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.