ಬೆಂಗಳೂರು: 2023ರ ಬೆಂಗಳೂರು ಏರ್ ಶೋ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದಾರೆ. ನಾಳೆ ಬೆಳಗ್ಗೆ 9:30 ಕ್ಕೆ ಯಲಹಂಕ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏರ್ ಶೋ ಗೆ ಚಾಲನೆ ನೀಡಲಿದ್ದು, 9.30ರಿಂದ 11.30ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದಾದ ಬಳಿಕ ಮೋದಿ, ಏರೋ ಇಂಡಿಯಾದ ವೈಮಾನಿಕ ಪ್ರದರ್ಶನ ವೀಕ್ಷಿಸಲಿದ್ದಾರೆ.