ಬೆಂಗಳೂರಿನತ್ತ ಶೆಟ್ಟರ ಪಯಣ

ಶೆಟ್ಟರ್‌
Advertisement

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಂಗಳೂರಿನತ್ತ ಪ್ರಯಾಣ ಕೈಗೊಂಡಿದ್ದು, ಬಿಜೆಪಿ‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ‌ ನೀಡಿ‌ ನಂತರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಕಳುಹಿಸಿದ ವಿಶೇಷ ವಿಮಾನದಲ್ಲಿ ತೆರಳಿದ ಶೆಟ್ಟರ್ ಅವರೊಂದಿಗೆ ಉದ್ಯಮಿ ಯು.ಬಿ.ಶೆಟ್ಟಿ, ಹು-ಧಾ ಸೆಂಟ್ರಲ್​ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಜತ್ ಉಳ್ಳಾಗಡ್ಡಿಮಠ ಇದ್ದಾರೆ.