ಬೆಂಗಳೂರು: ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಕೆಎಸ್ಆರ್ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಬಸ್ಗೆ ಚಾಲನೆ ನೀಡಿದ್ದಾರೆ.
ಎಕ್ಸ್ಪ್ರೆಸ್ವೇನಲ್ಲಿ ಈ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ನಲ್ಲಿ ವಿದ್ಯಾರ್ಥಿ ಪಾಸ್ಗೆ ಅವಕಾಶವಿಲ್ಲ. ಮುಂದಿನ ಮೂರು ತಿಂಗಳಲ್ಲಿ 50 ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲಿವೆ. ಬೆಂಗಳೂರಿನ ಹತ್ತಿರದ ಜಿಲ್ಲೆಗಳಿಗೆ ಸಂಚರಿಸಲಿವೆ. 300 ಕಿ.ಮೀ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬಸ್ ಓಡಿಸಲು ಕೆಎಸ್ಆರ್ಟಿಸಿ ನಿರ್ಧಾರ ಮಾಡಿದೆ.
ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್ಗು ಚಾರ್ಜಿಂಗ್ ಸಾಕೆಟ್, ಎಸಿ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಂಡಿದೆ.