ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ

SAVRKAR
Advertisement

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿಯೂ ಕೂಡ ಸಾವರ್ಕರ್‌ ಭಾವಚಿತ್ರವನ್ನು ಅಳವಡಿಕೆ ಮಾಡಲಾಗಿದೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕೂಡ ಉಪಸ್ಥಿತರಿದ್ದರು. ವೀರ್ ಸಾವರ್ಕರ್ ಬೆಳಗಾವಿ ಹಿಂಡಲಗಾ ಜೈಲಲ್ಲಿ 100 ದಿನ ವಿಚಾರಣಾಧೀನ ಕೈದಿಯಾಗಿ ಸೆರೆವಾಸದಲ್ಲಿದ್ದರು. 1950ರ ಜುಲೈ 13ರಂದು ಬೆಳಗಾವಿ ಹಿಂಡಲಗಾ ಜೈಲಿನಿಂದ ರಿಲೀಸ್ ಆಗಿದ್ದರು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿಚಾರಣಾಧೀನ ಕೈದಿಯಾಗಿ ಸೆರೆವಾಸದಲ್ಲಿದ್ದ ವೀರ್‌ ಸಾವರ್ಕರ್ ಅವರನ್ನು 100 ದಿನ ಹಿಂಡಲಗಾ ಜೈಲಿನಲ್ಲಿ ಸೆರೆ ಇಡಲಾಗಿತ್ತು. ವೀರ್ ಸಾವರ್ಕರ್ ಅವರು 1950ರ ಏಪ್ರಿಲ್ 4ರಂದು ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದರು. ಪಾಕಿಸ್ತಾನ ಪ್ರಧಾನಿ ಲಿಯಾಕತ್ ಅಲಿ ಖಾನ್ ಭಾರತ ಭೇಟಿ‌ ವಿರೋಧಿಸಿದ್ದ ಕಾರಣಕ್ಕಾಗಿ ಜೈಲಿಗೆ ಕಳುಹಿಸಲಾಗಿತ್ತು. ಈ ವೇಳೆ ಸಾವರ್ಕರ್ ಬಂಧಿಸಿ ಬೆಳಗಾವಿ ಜೈಲಿಗೆ ಕಳುಹಿಸಿದ್ದ ಪೊಲೀಸರು.