ಬೆಳಗಾವಿ: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು,ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದರು. ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೋಗುವಾಗ ಬುಲೋರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಸಂಚರಿಸುತ್ತಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಈ ದುರಂತ ಘಟನೆಯಲ್ಲಿ ಇಬ್ಬರು ಬಾಲಕಿಯರು ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಚುಂಚನೂರು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.