ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಕಿಡಿಗೇಡಿಗಳು ಅವರ ಗೆಳೆಯರಿಂದ ಹಣ ಕೇಳುತ್ತಿರುವ ಬಗ್ಗೆ ತಡವಾಗಿ ತಿಳಿದು ಬಂದಿದೆ.
ಜಿಲ್ಲಾ ಎಸ್ಪಿ ಸಂಜೀವ ಪಾಟೀಲ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಹಣ ಕೇಳುತ್ತಿರುವ ಖದೀಮರ ಬಗ್ಗೆ ಎಚ್ಚರ ವಹಿಸಿ ಅವರ ಮನವಿ ತಿರಸ್ಕರಿಸುವಂತೆ ಎಸ್ಪಿ ಸಂಜೀವ ಪಾಟೀಲ ಕೋರಿದ್ದಾರೆ.
ಸ್ನೇಹಿತರಿಗೆ, ಫೇಸ್‌ಬುಕ್‌ನಲ್ಲಿ ಇರುವ ಪರಿಚಯಸ್ಥರಿಗೆ ಹಣ ಕೇಳಲಾಗುತ್ತಿದೆ. ಈವರೆಗೆ ಅನೇಕರಿಗೆ ಹಣ ಕೇಳಿ ಗೂಗಲ್‌ಪೇ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಇದು ಎಸ್‌ಪಿ ಸಂಜೀವ ಪಾಟೀಲ ಅವರ ಗಮನಕ್ಕೆ ವಿಷಯ ಬಂದಿದ್ದು, ಕೂಡಲೇ ಇದನ್ನು ತಿರಸ್ಕರಿಸುವಂತೆ ಕೋರಿದ್ದಾರೆ.
ನನ್ನ ಹೆಸರು ಮತ್ತು ಫೋಟೊ ಬಳಸಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಯಾರೋ ಸಾರ್ವಜನಿಕರಲ್ಲಿ ಹಣ ಕೇಳುತ್ತಿದ್ದು ಕಂಡು ಬಂದಿದ್ದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಸಾರ್ವಜನಿಕರು ಇಂತಹ ಖಾತೆಗಳ ಮನವಿ ತಿರಸ್ಕರಿಸಿ ಈ ಬಗ್ಗೆ ಎಚ್ಚರ ವಹಿಸಲು ಅವರು ಕೋರಿದ್ದಾರೆ.