test
Advertisement
ಬೆಳಗಾವಿ: ಖಾನಾಪೂರ ತಾಲೂಕಿನ ಗವಳಿವಾಡದಲ್ಲಿ ವಾರದ ಹಿಂದೆ ನವಜಾತ ಶಿಶುವನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ಮರಕ್ಕೆ ತೂಗು ಹಾಕಿದ ಪ್ರಕರಣದಲ್ಲಿ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಲು ಅಪ್ಪು ಪಿಂಗಳೆ (19) ಸಾ. ಗವಳಿವಾಡ-ನೆರ್ಸಾ ಎಂದು ಗುರುತಿಸಲಾಗಿದೆ. ಈ ಯುವಕ ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಮದುವೆ ಆಮಿಷ ಒಡ್ಡಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ನಂತರ ಹುಟ್ಟಿದ ಮಗುವನ್ನು ಪ್ಲಾಸ್ಟಿಕ್ ಕವರಿನಲ್ಲಿ ಮರಕ್ಕೆ ತೂಗು ಹಾಕಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ ಎಂದು ಗೊತ್ತಾಗಿದೆ.
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಆತನ ವಿರುದ್ಧ ಮಕ್ಕಳ ಲೈಂಗಿಕ ಶೋಷಣೆ ತಡೆ ಕಾಯ್ದೆ 2012ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಆಗಸ್ಟ್ 25 ರಂದು ಬೆಳಿಗ್ಗೆ ನೆರ್ಸಾ-ಗವಳಿವಾಡದಲ್ಲಿ ಒಂದು ದಿನದ ಗಂಡು ಶಿಶುವು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದ್ದ ಬಗ್ಗೆ ಸಂ.ಕ ವರದಿ ಮಾಡಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಶಿಶುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರ ತನಿಖೆಯಲ್ಲಿ ಪ್ರಕರಣದ ಸತ್ಯಾಂಶ ಬೆಳಕಿಗೆ ಬಂದಿದೆ.
Like this:
Like Loading...