ಬೆಳಗಾವಿ: ಚಿಕ್ಕೋಡಿ: ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್‌ನಲ್ಲಿ ಎನ್‌ಸಿಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕರ್ನಾಟಕ ಪ್ರವೇಶಕ್ಕೆ ಯತ್ನಿಸಿದ್ದಾರೆ.
ಸಂಸದ ಧೈರ್ಯಶೀಲ ಮಾನೆ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಹಸನ ಮುಶ್ರಫ್ ಹಾಗೂ ಶಿವಸೇನೆಯ ಅಧ್ಯಕ್ಷ ವಿಜಯ ದೇವಣೆ ಸೇರಿ ಸುಮಾರು 300ಕ್ಕೂ ಕಾರ್ಯಕರ್ತರನ್ನು ಕೊಗನೊಳ್ಳಿ ಚೆಕ್ ಪೋಸ್ಟ್‌ನಲ್ಲಿ ರಾಜ್ಯ ಪೊಲೀಸರು ತಡೆದಿದ್ದಾರೆ. ಇದೇ ಸಂಧರ್ಭದಲ್ಲಿ ಪೊಲೀಸರು ಮತ್ತು ಶಿವಸೇನೆ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.