ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡರಲ್ಲಿ ಯಾವುದೇ ಭೇದ ಭಾವ ಇಲ್ಲ. ಯಾರ ಮಧ್ಯೆ ಒಳಜಗಳವೂ ಇಲ್ಲ. ಎಲ್ಲರೂ ಸೇರಿಯೇ ಮುಂದಿನ ಚುನಾವಣೆ ಎದುರಿಸುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದರು.
ಬೆಳಗಾವಿಯ ಚಿಕ್ಕೋಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಇದರಲ್ಲಿ ಸಿಎಂ ಅವರದೇ ಪರಮಾಧಿಕಾರವಾಗಿದೆ ಎಂದರು.
ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿದ್ದು 18 ರಾಜ್ಯಗಳಲ್ಲಿ ಸರಕಾರವಿದೆ. ಪಕ್ಷಕ್ಕೆ ಸಂಬಂಧಿಸಿ ರಾಜ್ಯ-ಕೇಂದ್ರೀಯ ಚುನಾವಣಾ ಸಮಿತಿಗಳೂ ಇವೆ. ಅಭ್ಯರ್ಥಿ ಆಯ್ಕೆಯಂಥ ವಿಚಾರದಲ್ಲಿ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಚುನಾವಣಾ ಅಧಿಸೂಚನೆ ಹೊರಬಿದ್ದಾಗ ಅಭ್ಯರ್ಥಿಯ ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದರು.