ಬ್ಯಾಂಕ್‌ಗಳಿಂದ ರೈತರ ಆಸ್ತಿ ಜಪ್ತಿಗೆ ನಿಷೇಧ: ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿ
Advertisement

ಚಿತ್ರದುರ್ಗ: ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್‌ಗಳು ರೈತರ ಆಸ್ತಿ ಜಪ್ತಿ ಮಾಡುವುದು ನೋಟೀಸ್ ಜಾರಿ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ಅವರ ಆಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಆಯೋಜಿಸಿದ್ದ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬದ್ಧತೆಯಿಂದ ಕೆಲಸ ಮಾಡುವ ಕ್ರಿಯಾಶಕ್ತಿಯೇ ಭಕ್ತಿಯ ಶಕ್ತಿ. ಗುರುಗಳಿಂದ ಪ್ರೇರಣೆ ಪಡೆದು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ನಮ್ಮ ಪ್ರಯತ್ನ ಮಾಡಲಾಗುತ್ತಿದೆ. 3 ಲಕ್ಷ ದವರೆಗೆ ಬಡ್ಡಿರಹಿತ ಸಾಲ ನೀಡಿದರೂ ಅತಿವೃಷ್ಟಿ, ಅನಾವೃಷ್ಟಿ ಕಾರಣದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ವರ್ಷ ಉತ್ತಮ ಮಳೆಯಾಗಿದೆ. ಕೆರೆ ಕಟ್ಟೆ ತುಂಬಿ ನೀರು ಇನ್ನು 2-3 ವರ್ಷಗಳಿಗೆ ತೊಂದರೆ ಇಲ್ಲ. ಕೆಲವೆಡೆ ಪ್ರವಾಹವಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.