ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನವರಿಗೆ ಪಿಎಫ್ಐ ಬ್ಯಾನ್ ಆಗಿದ್ದನ್ನು ಅವರಿಂದ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ. ಒಂದು ವೇಳೆ ಅವರು ಅದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದಲ್ಲಿರುವ ಎಲ್ಲ ಅಲ್ಪಸಂಖ್ಯಾತರು ಕೆಟ್ಟವರು ಎಂದು ನಾವು ಎಂದೂ ಹೇಳಿಲ್ಲ. ಯಾರು ಉಗ್ರವಾದಿ ಚುಟುವಟಿಕೆಯಲ್ಲಿ ಭಾಗಿಯಾಗಿರುತ್ತಾರೋ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಪಿಎಫ್ಐ ಬ್ಯಾನ್ ಮಾಡಿದ್ದನ್ನು ಸಹಿಸಲಾಗದೇ ಅವರು ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕೆಂದು ಹೇಳುತ್ತಿದ್ದಾರೆ. ಆದರೆ, ಪಿಎಫ್ಐ ಬ್ಯಾನ್ ಮಾಡಲು ಸಾಕ್ಷಿಗಳಿವೆ ಎಂದರು.