ನವದೆಹಲಿ: ಖ್ಯಾತ ಅಥ್ಲೆಟಿಕ್ಸ್ ಪಿ.ಟಿ ಉಷಾ ಅವರನ್ನು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಕೇಂದ್ರ ಕ್ರೀಡಾ ಸಚಿವರಾಗಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ಪಿ.ಟಿ. ಉಷಾ ಅವರನ್ನು ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿರಣ್ ರಿಜಿಜು, ಭಾರತೀಯ ಒಲಿಂಪಿಕ್ ಅಸೋಸಿಯೇಶನ್’ನ ಅಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ಪಿ.ಟಿ. ಉಷಾ ಅವರಿಗೆ ಅಭಿನಂದನೆಗಳು. ಪ್ರತಿಷ್ಠಿತ ಭಾರತೀಯ ಒಲಿಂಪಿಕ್ ಸಂಸ್ಥೆಯ ಪದಾಧಿಕಾರಿಗಳಾಗಿರುವ ನಮ್ಮ ದೇಶದ ಎಲ್ಲಾ ಕ್ರೀಡಾಪಟುಗಳನ್ನು ನಾನು ಅಭಿನಂದಿಸುತ್ತೇನೆ. ರಾಷ್ಟ್ರ ಅವರ ಬಗ್ಗೆ ಹೆಮ್ಮೆ ಪಡುತ್ತದೆ ಎಂದು ಅವರು ತಿಳಿಸಿದ್ದಾರೆ.