ಅಹಮದಾಬಾದ್: ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಸೋಮವಾರ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಹಲವು ನಾಯಕರು ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಭೂಪೇಂದ್ರ ಪಟೇಲ್ ಜೊತೆಗೆ ಹಲವು ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್, ಓಬಿಸಿ ನಾಯಕ ಅಲ್ಪೇಶ್ ಠಾಕೂರ್, ಕ್ರಿಕೆಟಗ ರವಿಂದ್ರ ಜಡೇಜಾ ಪತ್ನಿ ರಿವಾನಾ ಸಂಪುಟ ಸೇರುವುದು ಖಚಿತ ಎನ್ನಲಾಗುತ್ತಿದೆ. 182 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆದ್ದಿತ್ತು.