ಭೇಟಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ

ಸತೀಶ ಜಾರಕಿಹೊಳಿ
Advertisement

ಹುಬ್ಬಳ್ಳಿ: ಕರ್ನಾಟಕದ ಪ್ರಭಾವಿ ಸಚಿವರು ತೆಲಂಗಾಣ ಚುನಾವಣೆ ವೇಳೆ ಗೋವಾದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪರಸ್ಪರ ಭೇಟಿಯಾಗಬಹುದು. ಭೇಟಿಯಾಗದೇ ಇರಲು ಅವರೇನು ಶತ್ರುಗಳಲ್ಲ. ಆ ಪಕ್ಷದಿಂದ ಈ ಪಕ್ಷಕ್ಕೆ ಈ ಪಕ್ಷದಿಂದ ಆ ಪಕ್ಷಕ್ಕೆ ಒಬ್ಬರಲ್ಲ ಒಬ್ಬರು ಹೋಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಒಬ್ಬರನ್ನೊಬ್ಬರು ಭೇಟಿಯಾಗಿರುತ್ತಾರೆ. ಹೀಗಾಗಿ, ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದರು.
ನಾಯಕರು ಒಬ್ಬರನ್ನೊಬ್ಬರು ಭೇಟಿಯಾದಾಗ ರಾತ್ರಿ ೨ ಗಂಟೆ ಮಾತ್ರವಲ್ಲ, ಇಡೀ ರಾತ್ರಿನೇ ಚರ್ಚೆ ಮಾಡಿರಬಹುದು. ಅವರವರ ನಡುವೆ ಸ್ನೇಹ ಇದ್ದೇ ಇರುತ್ತದೆ. ಸ್ನೇಹದಿಂದಾಗಿ ಅವರು ಭೇಟಿಯಾಗಿದ್ದಾರೆ. ಇಲ್ಲಿಯೂ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸ್ನೇಹಿತರಿದ್ದಾರೆ. ಬೇರೆ ಬೇರೆ ಪಕ್ಷದವರು ನಮ್ಮನ್ನು ಭೇಟಿಯಾಗುತ್ತಾರೆ. ಇದರಿಂದ ಬೇರೆ ಅರ್ಥ ಕಲ್ಪಿಸಿದರೆ ಹೇಗೆ? ಎಂದರು.