ರಾಯಚೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಭಾನುವಾರ ಬೆಳಿಗ್ಗೆ ಮಂತ್ರಾಲಯಕ್ಕೆ ಭೇಟಿ ನೀಡಿ. ಶ್ರೀ ರಾಘವೇಂದ್ರ ಸ್ವಾಮಿಗಳವರ ಮೂಲ ಬೃಂದಾವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮೊದಲು ಗ್ರಾಮ ದೇವತೆ ಶ್ರೀ ಮಂಚಾಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ
ಸುಭುದೇಂದ್ರ ತೀರ್ಥ ಶ್ರೀಪಾದಂಗಳವರಿಂದ ಆಶೀರ್ವಾದ ಪಡೆದರು.
ನಂತರ ಶ್ರೀಮಠದಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಾದ ಅಭಯ ಆಂಜನೇಯ ಸನ್ನಿಧಾನ, ಶ್ರೀ ಅಭಯ ರಾಮನ ಪ್ರತಿಮೆಯ ಕಾರ್ಯಕ್ಷೇತ್ರ, ವಿದ್ಯಾಪೀಠ ಮತ್ತು ಗೋಶಾಲೆ ಮುಂತಾದವುಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಶ್ರೀ ಮಠದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.