ರಾತಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರು ಕುಟುಂಬ ಸಮೇತವಾಗಿ ಶನಿವಾರ ಭೇಟಿ ನೀಡಿ ಶ್ರೀ ರಾಯರ ಮೂಲ ಬೃಂದಾವನ ದರ್ಶನವನ್ನು ಪಡೆದುಕೊಂಡರು. ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಮಂತ್ರಾಲಯದ ಗ್ರಾಮದೇವತೆ ಮಂಚಾಲಮ್ಮ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು, ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ನಂತರ ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ
ತೀರ್ಥ ಶ್ರೀಪಾದಂಗಳವರು ಅವರಿಂದ ಆಶೀರ್ವಾದ ಪಡೆದುಕೊಂಡರು. ರಾಯಚೂರು ನಗರದಲ್ಲಿ ಸಂಜೆ ಏರ್ಪಡಿಸಿರುವ ವೇದ ಚಿತ್ರದ ಬಿಡುಗಡೆಯ ಪೂರ್ವ ಪ್ರಚಾರದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಹಾಗೂ ಇತರ ಕಲಾವಿದರೊಂದಿಗೆ ಮಂತ್ರಾಲಯ ಕ್ಷೇತ್ರಕ್ಕೆ ಬೆಳಿಗ್ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.