ಮಣಿಪಾಲ ಆಸ್ಪತ್ರೆಗೆ ದೊಡ್ಮನಿ ಏರಲಿಫ್ಟ್

Advertisement

ಕಲಬುರಗಿ: ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಮನಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ತೆಗೆ ಏರ್ ಲಿಫ್ಡ್ ಮಾಡಲಾಯಿತು. ಇಲ್ಲಿನ ಯುನೈಟೆಡ್ ಆಸ್ಪತ್ರೆಯಲ್ಲಿ ಕಳೆದ ದಿ. ೧೧ ರಂದು ದಾಖಲಾಗಿದ್ದ ಇವರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಯಿತು. ಜಿರೋ ಟ್ರಾಫಿಕ್ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿದಂದ ಅನ್ನಪೂರ್ಣ ಕ್ರಾಸ್ ಮಾರ್ಗವಾಗಿ ನೇರವಾಗಿ ವಿಮಾನ ನಿಲ್ದಾಣ ಕ್ಕೆ ಆಂಬುಲೆನ್ಸ್ ಮೂಲಕ ಕರದೊಯಲಾಯಿತು. ಸಂಸದ ಡಾ. ಉಮೇಶ ಜಾಧವ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ್, ಕೃಷ್ಣ ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ಸಾಥ್ ನೀಡಿದರು.