ಮತ ಕೇಳಲು ಬಿಜೆಪಿಗರಿಗೆ ಮುಖವಿಲ್ಲ

ಲಾಡ್
Advertisement

ಹುಬ್ಬಳ್ಳಿ: ಬಿಜೆಪಿಯವರಿಗೆ ಮತದಾರರ ಹತ್ತಿರ ಹೋಗಿ ಮತ ಕೇಳಲು ಮುಖವಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಕರೆಸಿ ರ‍್ಯಾಲಿ ಮಾಡಿಸಿದ್ದಾರೆ. ಇದೀಗ ಸ್ಟಾರ್‌ಗಳ ಮೂಲಕ ಜನರನ್ನು ಆಕರ್ಷಣೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಸಂತೋಷ ಲಾಡ್ ವ್ಯಂಗ್ಯವಾಡಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ದಿನಗಣನೇ ಆರಂಭವಾಗಿದೆ. ಈ ವೇಳೆಯೂ ಬಿಜೆಪಿ ತಮ್ಮ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ ಎಂಬುದನ್ನು ನೋಡಿದರೇ ಅರ್ಥ ಮಾಡಿಕೊಳ್ಳಬೇಕು. ಇತ್ತೀಚೆಗೆ ಸಿನಿಮಾ ನಟರನ್ನು ಕರೆಸಿ ಪ್ರಚಾರ ಮಾಡುತ್ತಿದ್ದಾರೆ ಎಂದರು.
ಎ. 19ರಂದು ಕಲಘಟಗಿ ವಿಧಾನಸಭಾ ಮತಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಸಣ್ಣವರು ಅಲ್ಲ, ದೊಡ್ಡವರು ಆಗೋದಿಲ್ಲ, ಜನರು ತೀರ್ಮಾನ ಮಾಡುತ್ತಾರೆ. ಈ ಮೂಲಕ ಮತ್ತೊಮ್ಮೆ ನನಗೆ ಬೆಂಬಲಿಸಿ ಪುನಃ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾರೆಂಬ ಸಂಪೂರ್ಣ ವಿಶ್ವಾಸ ನನಗೆ ಇದೆ ಎಂದರು.