ಬೆಳಗಾವಿ: ಬೃಹತ್ ಆಕಾರದ ಮರವೊಂದು ಸಂಚರಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಪರಿಣಾಮ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಆರ್‌ಟಿಓ(ಸಂಗೊಳ್ಳಿ ರಾಯಣ್ಣ) ವೃತ್ತದ ಬಳಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮಂಗಳವಾರ ಬೆಳಿಗ್ಗೆ ಆರ್‌ಟಿಓ ವೃತ್ತದ ಬಳಿ ಬೈಕ್ ಸವಾರರು ಸಂಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೃಹದಾಕಾರದ ಮರ ಉರುಳಿ ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಈ ಘಟನೆಯಲ್ಲಿ ಓರ್ವ ಯುವಕ ಮರದ ಕೆಳಗೆ ಸಿಲುಕಿ ಮೃತಪಟ್ಟಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬೆಳಗಾವಿ ನಗರ ಉಪ ಪೊಲೀಸ ಆಯುಕ್ತ ರವೀಂದ್ರ ಗಡಾದಿ ಹಾಗೂ ಮಾರ್ಕೆಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.