ಮಾಜಿ ಸಚಿವರಿಗೆ ಕೊಲೆ ಬೆದರಿಕೆ ಪತ್ರ

Advertisement

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಮನೆಗೆ ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಪತ್ರಗಳು ಬರುತ್ತಿವೆ ಎಂದು ತಿಳಿದು ಬಂದಿದೆ.
ಗುರುವಾರ ಸಂಜೆ ಅನಾಮಧೇಯ ವ್ಯಕ್ತಿಗಳಿಂದ ಮನೆಗೆ ಪತ್ರ ಬಂದಿದ್ದು, ಪತ್ರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ಕುಟುಂಬಕ್ಕೂ ಜೀವ ಬೆದರಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಮಾಜಿ ಸಚಿವ ವಿನಯ ಅವರ ಪತ್ನಿ ಇದ್ದಾಗ ಪತ್ರಗಳು ಬಂದಿದ್ದು, ಗಾಭರಿಗೊಂಡ ಅವರು ಶುಕ್ರವಾರ ಈ ಕುರಿತು ತನಿಖೆ ನಡೆಸುವಂತೆ ಉಪನಗರ ಠಾಣೆಗೆ ದೂರು ದಾಖಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.