ಮಾಜಿ ಸಚಿವ ಜಬ್ಬಾರಖಾನ್ ಹೊನ್ನಳ್ಳಿ ಇನ್ನಿಲ್ಲ

ಮಾಜಿ ಸಚಿವ ಹೊನ್ನಳ್ಳಿ ಇನ್ನಿಲ್ಲ
Advertisement

ಹುಬ್ಬಳ್ಳಿ: ಮಾಜಿ ಸಚಿವ, ಅಂಜುಮನ್ ಇ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿದ್ದ ಜಬ್ಬಾರಖಾನ್ ಹೊನ್ನಳ್ಳಿ (80) ಅವರು ಶುಕ್ರವಾರ ನಿಧನರಾದರು. ಅವರಿಗೆ ಪತ್ನಿ, ಒಬ್ಬ ಪುತ್ರ, ಆರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಇದ್ದಾರೆ.
ಬಹು ದಿನಗಳಿಂದ ಅವರು ಅನಾರೋಗ್ಯವಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಿಗ್ಗೆ 6.45ರ ವೇಳೆಗೆ ನಿಧನರಾದರು.
ಸರಳ ಸಜ್ಜನಿಕೆಯ ರಾಜಕಾರಣಿ...
ಜನಾನುರಾಗಿಯಾಗಿದ್ದ ಅವರು ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಖ್ಯಾತಿ ಹೊಂದಿದ್ದರು. ಪ್ರೀತಿಯಿಂದ ಜನರು ಇವರನ್ನು ಕರೆಯುತ್ತಿದ್ದುದೇ ʻಜನಾಬ್’ ಎಂದು. 1999 ಮತ್ತು 2007ರಲ್ಲಿ ಹುಬ್ಬಳ್ಳಿ ಶಹರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗ ಜಬ್ಬಾರಖಾನ್ ಹೊನ್ನಳ್ಳಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿತ್ತು.