ಮಾಡಾಳ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಹೈ ಕೋರ್ಟ್
Advertisement

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಕೋರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೋಮವಾರ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ತುರ್ತು ಪರಿಸ್ಥಿತಿಯ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಸುವಂತೆ ಶಾಸಕರ ಪರ ವಕೀಲ ಸಂದೀಪ್ ಮನವಿ ಮಾಡಿದರು. ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೆ. ನಟರಾಜನ್ ನೇತೃತ್ವದ ಪೀಠ ವಿಚಾರಣೆಯನ್ನು ಮಂಗಳವಾರಕ್ಕೆ (ಮಾರ್ಚ್ 7) ಮುಂದೂಡಿತು.