ಸಾಂಸ್ಕೃತಿಕ ನಗರಿ ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇದೇ ಮಾರ್ಚ್ 9ರಂದು “ಹುಬ್ಬಳ್ಳಿ ಜಗ್ಗಲಗಿ ಹಬ್ಬ” ನಡೆಯಲಿದ್ದು, ಇಂದು ಕಾರ್ಯಕ್ರಮದ ಲೋಗೋ ಹಾಗೂ ಟೀಸರ್‌ನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿಡುಗಡೆ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ “ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುತ್ತಿದ್ದಂತೆ ನಮ್ಮ ನೆಲದ ಸಂಸ್ಕೃತಿ ಆಚರಣೆಗಳು ಹಾಗೂ ಸಾಂಸ್ಕೃತಿಕ ವೈಭವವನ್ನು ನಾವು ಉಳಿಸಲು ಬೆಳೆಸಲು ಸಾಧ್ಯವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ನಮ್ಮ ದೇಶದಲ್ಲಿ ಸಾಂಸ್ಕೃತಿಕ ಉತ್ಸವಗಳು ಹೆಚ್ಚು ನಡೆಯಬೇಕೆಂದು ಆಶಯ ಇಟ್ಟುಕೊಂಡಿದ್ದಾರೆ. ಇಂತಹ ಸಂದರ್ಭಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದಾದರೊಂದಂತೆ ಸಾಂಸ್ಕೃತಿಕ ಉತ್ಸವವನ್ನು ನಡೆಸುತ್ತಿದ್ದೇವೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಉತ್ಸವದಲ್ಲಿ ಜಿಲ್ಲೆಯ ಜನರು ಭಾಗವಹಿಸಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗೋಣ” ಎಂದಿದ್ದಾರೆ.