ಮೀಸಲಾತಿ ವಿಚಾರವಾಗಿ ಶೀಘ್ರ ಸರ್ವಪಕ್ಷ ಸಭೆ: ಸಿಎಂ

ಮೀಸಲಾತಿ
Advertisement

ಪರಿಶಿಷ್ಟ ಪಂಗಡ ಮೀಸಲಾತಿ ಕುರಿತಂತೆ ಎಲ್ಲರ ಅಭಿಪ್ರಾಯ ಪಡೆಯಬೇಕಿದ್ದು, ವಾಲ್ಮೀಕಿ ಶ್ರೀಗಳು ತಮ್ಮ ಪ್ರತಿಭಟನೆಯನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ವಿಧಾನಸಭೆ ಕಲಾಪದಲ್ಲಿ ಎಸ್ಸಿ-ಎಸ್‌ಟಿ ಮತ್ತು ಓಬಿಸಿ ಮೀಸಲಾತಿ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಈ ಕುರಿತಂತೆ ಶೀಘ್ರದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದರು. ಇನ್ನು ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಕೊಡಿಸಲು ಸರ್ಕಾರ ಬದ್ಧವಾಗಿದೆ. ಮೀಸಲಾತಿ ಹೆಚ್ಚಳದ ಬಗ್ಗೆ ಚರ್ಚೆ ಮಾಡಿ ವೈಜ್ಞಾನಿಕವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಶ್ರೀ ಉಪವಾಸ ಸತ್ಯಾಗ್ರಹ ಕೈ ಬಿಡಬೇಕು ಎಂದು ಮನವಿ ಮಾಡಿದರು.