ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ನಾಲ್ಕು ಬಾರಿ ಮುಖ್ಯಮಂತ್ರಿಗಳು ಹೇಳಿ ಕೈಕೊಟ್ಟಿದ್ದಾರೆ. ಇದೇ 22 ಕ್ಕೆ ಮೀಸಲಾತಿ ಸಿಗುವ ಭರವಸೆ ಇದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.
ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೀಸಲಾತಿ ಸಮಿತಿಯಿಂದ ವರದಿ ತರಸಿಕೊಳ್ಳಲಾಗುತ್ತಿದೆ ಎನ್ನುತ್ತಲೇ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರ ಮೇಲೆ ಒತ್ತಡ ಇದೆ ಎನೋ ಗೊತ್ತಿಲ್ಲ. ಆದರೆ, 22ಕ್ಕೆ ಮೀಸಲಾತಿ ಸಿಗುವ ಭರವಸೆ ಇದೆ ಎಂದರು.
ಇದಕ್ಕೆ ಸಂಬಂಧಿಸಿದಂತೆ ಬಸನಗೌಡ ಪಾಟೀಲ ಯತ್ನಾಳ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಮುಂದೆ ಏನಾಗುತ್ತದೆ ನೋಡೋಣ ಎಂದರು. ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ವಿಚಾರವಾಗಿ ಪ್ರತಿಕ್ರಿಯೇ ನೀಡಿದ ಅವರು, ಚುನಾವಣೆ ಹತ್ತಿರ ಬಂದಾಗ ಇದೆಲ್ಲ ಸಾಮಾನ್ಯ. ಅದನ್ನು ಕಾನೂನು ಮೂಲಕ ಅವರು ನೋಡಿಕೊಳ್ಳುತ್ತಾರೆ ಎಂದರು. ಈಶ್ವರಪ್ಪ, ರಮೇಶ ಜಾರಕಿಹೊಳಿ ಸದನಕ್ಕೆ ಗೈರಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ತಮ್ಮ ಕ್ಷೇತ್ರದ ಪ್ರತಿನಿಧಿಯಾಗಿ ಅವರು ಅಧಿವೇಶನದಲ್ಲಿ ಪಾಲ್ಗೊಳ್ಳಬೇಕು. ಕ್ಷೇತ್ರದ ಸಮಸ್ಯೆ ಕುರಿತು ಚರ್ಚೆ ಮಾಡಬೇಕು ಎಂದು ಸುಮ್ಮನಾದರು.