ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಮೂಲನೆಯಾಗಲಿದೆ

Advertisement

ಮಂಡ್ಯ : ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಮೂಲನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆ ಬಗ್ಗೆ ಸ್ಪಷ್ಟತೆ ಇದೆ. ದೇಶದ ಜನ ತೀರ್ಮಾನ ಮಾಡಿ ಆಶೀರ್ವಾದ ಮಾಡಿದರೆ, ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಮೋದಿ ಮೂರನೇ ಬಾರಿ ಪ್ರಧಾನಿಯಾಗುವ ಮೂಲಕ ಇತಿಹಾಸ ಪುಟದಲ್ಲಿ ಸ್ವರ್ಣ ಅಕ್ಷರದಲ್ಲಿ ಬರೆಯುವ ದಾಖಲೆಯನ್ನು ಬಿಜೆಪಿ ಮಾಡುತ್ತದೆ ಎಂದಿದ್ದಾರೆ.